Breaking
6 Sep 2026, Sun

ನರಿಕೊಂಬುವಿನಲ್ಲಿ ಬಿರುವೆರ್ ಸೇವಾ ಟ್ರಸ್ಟ್‌ನಿಂದ “ಬಿಲ್ಲವರ ಕುಟುಂಬ ಮಿಲನ”

ನರಿಕೊಂಬು: ಬಿರುವೆರ್ ಸೇವಾ ಟ್ರಸ್ಟ್ (ರಿ.), ನರಿಕೊಂಬು ವತಿಯಿಂದ ಬಿಲ್ಲವರ ಕುಟುಂಬ ಮಿಲನ ಕಾರ್ಯಕ್ರಮ ಭಾನುವಾರ ನರಿಕೊಂಬುವಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕೇಶವ ಶಾಂತಿ ನರಿಕೊಂಬು, ವೆಂಕಟೇಶ ಶಾಂತಿ, ಜಗನ್ನಾಥ ಬಂಗೇರ ನಿರ್ಮಾಲ್, ಶ್ರೀಧರ ಮೇಸ್ತ್ರಿ ಸಾಜಂಕ್ಪಾಳಿಕೆ ಹಾಗೂ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ದಿನೇಶ್ ಭಾಗೀರಥಿ ಕೋಡಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಮಾತನಾಡಿ, ಬಿರುವೆರ್ ಸೇವಾ ಟ್ರಸ್ಟ್ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಬಿಲ್ಲವ ಸಮಾಜಕ್ಕೆ ಮಾತ್ರ ಸೀಮಿತವಾಗದೆ ಎಲ್ಲ ಸಮಾಜದವರನ್ನೂ ಒಗ್ಗೂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಗಳು ಜಿಲ್ಲೆಯ ಇತರ ಸಂಘ-ಸಂಸ್ಥೆಗಳಿಗೂ ಮಾದರಿಯಾಗಿವೆ ಎಂದು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಸಮಾಜದಲ್ಲಿ ಐಕ್ಯತೆ, ಸಂಘಟನೆ ಹಾಗೂ ಸೇವಾ ಮನೋಭಾವ ಬೆಳೆಸುವ ಕುರಿತು ಶುಭ ಸಂದೇಶ ನೀಡಿದರು.


ಕಾರ್ಯಕ್ರಮದಲ್ಲಿ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಬಂಟ್ವಾಳ ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಅಖಿಲ ಭಾರತ ಸೈನಿಕ ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ವಿ.ಎನ್. ಮೋನಪ್ಪ, ಮಾಜಿ ಸೈನಿಕ ನಾಗೇಶ್ ಎಸ್., ಬೂಡ ಬಂಟ್ವಾಳ ಅಧ್ಯಕ್ಷೆ ಬೇಬಿ ಕುಂದರ್, ಬಿಜೆಪಿ ಬಂಟ್ವಾಳ ಘಟಕದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ವಕೀಲೆ ಶೈಲಜಾ ರಾಜೇಶ್, ಮೂರ್ತೆದಾರರ ಸೇವಾ ಸಂಘ ಶಂಭೂರು ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್, ಸಂಜೀವ ಪೂಜಾರಿ ಕುಚ್ಚುಗುಡ್ಡೆ, ಹರಿಕೃಷ್ಣ ಬಂಟ್ವಾಳ, ಬಿಲ್ಲವ ಸಂಘದ ಉಪಾಧ್ಯಕ್ಷ ಜಯಪ್ರಕಾಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ ಸಾಲ್ಯಾನ್, ರಾಜೇಶ್ ಸುವರ್ಣ, ಯಶವಂತ ದೇರಾಜೆ, ಗಣೇಶ್ ಸುವರ್ಣ, ವಿಶ್ವನಾಥ ಪೂಜಾರಿ, ಶೈಲೇಶ್ ಪೂಜಾರಿ, ಸಂತೋಷ್ ಕುಮಾರ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.


ಸಂಸ್ಥೆಯ ಅಧ್ಯಕ್ಷ ಸೀತಾರಾಮ ಪೂಜಾರಿ ಬೋಳಂತುರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಜೀವ ನಾಟಿ ವರದಿ ವಾಚಿಸಿದರು. ಪುರುಷೋತ್ತಮ ಸಾಲ್ಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ಮೋಹಲತ ಧನ್ಯವಾದ ಸಮರ್ಪಿಸಿದರು. ರಾಜೇಶ್ ದರ್ಕಸ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *