Breaking
7 Sep 2026, Mon

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದಡಿ ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ತಾಯಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತನಿಖೆಯ ವೇಳೆ ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ, ಬಳಿಕ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *