Breaking
21 Jul 2026, Tue

ಮಂತ್ರಾಲಯ ಬಳಿ ಭೀಕರ ಅಪಘಾತ; ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ

ಕರ್ನೂಲು: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಸಮೀಪ ಜುಲೈ 21ರ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ (43) ಮೃತಪಟ್ಟಿದ್ದಾರೆ.

ರವಿ ಶೆಟ್ಟಿ ಅವರು ಸ್ನೇಹಿತರೊಂದಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *