ಬಂಟ್ವಾಳ: ಇತ್ತೀಚಿಗೆ ಬಂಟ್ವಾಳದ ಕೆ. ಎಸ್. ಆರ್. ಟಿ.ಸಿ . ಬಸ್ ಸ್ಟಾಂಡ್ ಲ್ಲಿ ಹಾಡು ಹಗಲೇ ಅವಿವಾಹಿತ ಲಾವಣ್ಯ ಎಂಬ ಮುಗ್ದ ಹುಡುಗಿಯನ್ನು ಬಹಿರಂಗವಾಗಿ ಬೆನ್ನಟ್ಟಿಕೊಂಡು ಕತ್ತಿಯಿಂದ ಇರಿದು ಹತ್ಯೆ ಮಾಡಿದ ಪ್ರೇಮ ಪಿಶಾಚಿ ನರಹಂತಕನಿಗೆ ನೇಣು ಶಿಕ್ಷೆಗೆ ಒಳಪಡಿಸುವ ಪೂರಕವಾದ ಪ್ರಕರಣವನ್ನು ಪೊಲೀಸ್ ಇಲಾಖೆ ದಾಖಲಿಸಬೇಕು. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರು ಸಹ ವಕೀಲರು ಆರೋಪಿ ಪರವಾಗಿ ನ್ಯಾಯಾಲಯದಲ್ಲಿ ವಾಧಿಸಲು ಬರಬಾರದು.

ಈ ಪ್ರಕರಣದಿಂದಾಗಿ ಇಂತಹ ಇನ್ನಿತರ ಕ್ರೂರಿಗಳಿಗೆ ಇದೊಂದು ಪಾಠವಾಗಬೇಕು. ಅಮಾಯಕ ಹೆಣ್ಣುಮಕ್ಕಳ ರಕ್ಷಣೆ ಆಗಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಂಡು ಮೃತ ಲಾವಣ್ಯಳ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಯವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ಸಲ್ಲಿಸಲು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ ನೋಣಲ್ ಗುತ್ತು,ಚಂದ್ರಶೇಖರ ಶೆಟ್ಟಿ ಅರಳ, ದಿನೇಶ್ ಪೂಜಾರಿ ಹುಲಿಮೇರು, ವಿಶ್ವನಾಥ್ ಶೆಟ್ಟಿಗಾರ್ ಸಂಗಬೆಟ್ಟು,ಶಿವ ಗೌಡ,ಜಾರಪ್ಪ ನಾಯ್ಕ, ವೀರಪ್ಪ ಪರವ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿ, ಧನ್ಯವಾದವಿತ್ತರು.







