Breaking
22 Jul 2026, Wed

ಶಾಸಕ ಹರೀಶ್ ಪೂಂಜ ಮುತುವರ್ಜಿಯಿಂದ ಪದವು–ಬೊಳ್ಮನಾರ್ ರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಗೆ ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ತುರ್ತು ಸ್ಪಂದನೆ ದೊರೆತಿದೆ.

ಭಾರೀ ಮಳೆಯಿಂದ ಹಾನಿಗೊಳಗಾದ ರಸ್ತೆಯಲ್ಲಿ ಸಾರ್ವಜನಿಕರಿಗೆ ಸಂಚಾರ ತೊಂದರೆಯಾಗದಂತೆ ವೆಟ್ ಮಿಕ್ಸ್ ಹಾಕಿ ತಾತ್ಕಾಲಿಕ ದುರಸ್ತಿ ಕಾಮಗಾರಿ ನಡೆಸಲಾಗಿದೆ. ಜೊತೆಗೆ, ಮಳೆನೀರು ಸರಾಗವಾಗಿ ಹರಿಯಲು ಅಗತ್ಯ ಚರಂಡಿ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ.

ಈ ರಸ್ತೆಯ ಮರುಡಾಮರೀಕರಣಕ್ಕಾಗಿ ಈಗಾಗಲೇ ರೂ.30 ಲಕ್ಷ ಅನುದಾನ ಮಂಜೂರಾಗಿದ್ದು, ಆಡಳಿತಾತ್ಮಕ ಅನುಮೋದನೆಯೂ ದೊರೆತಿದೆ. ಮಳೆಗಾಲ ಹಿನ್ನೆಲೆಯಲ್ಲಿ ಶಾಶ್ವತ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗದ ಕಾರಣ ತಾತ್ಕಾಲಿಕ ದುರಸ್ತಿಗೆ ಆದ್ಯತೆ ನೀಡಲಾಗಿದೆ.

ಮಳೆಗಾಲ ಮುಗಿದ ತಕ್ಷಣ ರಸ್ತೆ ಮರುಡಾಮರೀಕರಣ ಕಾಮಗಾರಿ ಆರಂಭಿಸಿ, ಗುಣಮಟ್ಟದ ಶಾಶ್ವತ ರಸ್ತೆ ನಿರ್ಮಾಣದ ಮೂಲಕ ಸಾರ್ವಜನಿಕರ ಬಹುಕಾಲದ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *