Breaking
23 Oct 2026, Fri

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಪೊಲೀಸರ ಮೇಲೆ ಗುಂಡಿನ ದಾಳಿ, ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮತ್ತೆ ತಲೆದೋರಿದೆ. ಬುಧವಾರ ಮಧ್ಯಾಹ್ನ ಅನಂತನಾಗ್ ಜಿಲ್ಲೆಯ ಲಾಲ್ ಚೌಕ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 35 ವರ್ಷದ ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ ಹುತಾತ್ಮರಾಗಿದ್ದಾರೆ.

ಮಧ್ಯಾಹ್ನ ಸುಮಾರು 12:30ರ ವೇಳೆಗೆ ನಡೆದ ಈ ದಾಳಿಯ ವೇಳೆ ಆಶಿಕ್ ಹುಸೇನ್ ಕುರೇಷಿ ಅವರು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದರು. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಅನಂತನಾಗ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಅವರು ಚಿಕಿತ್ಸೆ ಫಲಕಾರಿಯಾಗುವ ಮುನ್ನವೇ ಮೃತಪಟ್ಟಿರುವುದಾಗಿ ಘೋಷಿಸಿದರು.

ಘಟನೆಯ ಬಳಿಕ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು, ಪರಾರಿಯಾಗಿರುವ ಉಗ್ರರ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. ಪಹಲ್ಗಾಮ್ ದಾಳಿಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ನಡೆದ ಮತ್ತೊಂದು ಉಗ್ರರ ದಾಳಿಯಿಂದ ಭದ್ರತಾ ವ್ಯವಸ್ಥೆ ಮತ್ತಷ್ಟು ಬಿಗಿಗೊಳಿಸಲಾಗಿದೆ.

Leave a Reply

Your email address will not be published. Required fields are marked *