Breaking
8 Sep 2026, Tue

ಫರಂಗಿಪೇಟೆ: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಪೊಲೀಸ್ ಬಲೆಗೆ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಮುಖ ಶಂಕಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳ ಸುಜೀರು ಬದಿಗುಡ್ಡೆ ನಿವಾಸಿ ಮೊಹಮ್ಮದ್ ಶಾಖಿರ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ನ್ಯಾಯಾಂಗ ಪ್ರಕ್ರಿಯೆಯಂತೆ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಕಳ್ಳತನದಲ್ಲಿ ಇತರರ ಪಾತ್ರವಿದೆಯೇ, ಕಳುವಾದ ಹಣ ಅಥವಾ ವಸ್ತುಗಳ ಪತ್ತೆ, ಘಟನೆಯಲ್ಲಿ ಬಳಸಿದ ವಾಹನ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿಯನ್ನು ತನಿಖೆಯ ಹಿತದೃಷ್ಟಿಯಿಂದ ಪೊಲೀಸರು ಬಹಿರಂಗಪಡಿಸಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಅಧಿಕೃತ ಮಾಹಿತಿ ಪ್ರಕಟಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *