Breaking
23 Jul 2026, Thu

ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

ಉಡುಪಿ: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪಡುಬಿದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಅನಿಲ್ ಎಂದು ಗುರುತಿಸಲಾಗಿದೆ. ಅನಿಲ್ ತನ್ನ ಪಾನ್ ಸ್ಟಾಲ್‌ನಲ್ಲಿ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು.


ದಾಳಿಯ ವೇಳೆ ಮಾರಾಟಕ್ಕೆ ಇಟ್ಟಿದ್ದ 625.83 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಮಾರಾಟದಿಂದ ಸಂಗ್ರಹಿಸಿದ್ದ ₹600 ನಗದುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *