Breaking
8 Sep 2026, Tue

ಅಕ್ರಮ ಮೀನುಗಾರಿಕೆ ಆರೋಪ: 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಕೊಲಂಬೊ: ಶ್ರೀಲಂಕಾದ ಸಮುದ್ರ ಗಡಿ ಉಲ್ಲಂಘಿಸಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದಡಿ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಬಳಿಯಿದ್ದ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆಯಲಾಗಿದೆ.


ಶ್ರೀಲಂಕಾ ನೌಕಾಪಡೆಯ ಮಾಹಿತಿ ಪ್ರಕಾರ, ಮೀನುಗಾರರು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (IMBL) ದಾಟಿ ತಲೈಮನ್ನಾರ್ನ ಉತ್ತರ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ ವಿಶೇಷ ಕಾರ್ಯಾಚರಣೆ ನಡೆಸಿದ ನೌಕಾಪಡೆ, 9 ಮಂದಿಯನ್ನು ಬಂಧಿಸಿ ದೋಣಿಯನ್ನು ವಶಕ್ಕೆ ಪಡೆದಿದೆ.


ಇದೇ ವೇಳೆ ಇರಾನತಿವು ದಕ್ಷಿಣ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ 50ಕ್ಕೂ ಹೆಚ್ಚು ಭಾರತೀಯ ಟ್ರಾಲರ್ಗಳು ಮೀನುಗಾರಿಕೆ ನಡೆಸುತ್ತಿರುವುದು ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ ಎಂದು ನೌಕಾಪಡೆ ತಿಳಿಸಿದೆ.


ಬಂಧಿತ ಮೀನುಗಾರರು ಹಾಗೂ ವಶಪಡಿಸಿಕೊಂಡ ಟ್ರಾಲರ್ ಅನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮನ್ನಾರ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *