Breaking
24 Jul 2026, Fri

ಜುಲೈ 26: ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಮಾಜ ಸೇವಾ ಸಂಘ (ರಿ.), ಸಿದ್ದಕಟ್ಟೆ ವತಿಯಿಂದ “ಆಟಿಡೊಂಜಿ ದಿನ”

ಸಿದ್ದಕಟ್ಟೆ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಮಾಜ ಸೇವಾ ಸಂಘ (ರಿ.), ಸಿದ್ದಕಟ್ಟೆ ವತಿಯಿಂದ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸಂಪ್ರದಾಯಬದ್ಧ “ಆಟಿಡೊಂಜಿ ದಿನ” ಕಾರ್ಯಕ್ರಮವು ಜುಲೈ 26 ಆದಿತ್ಯವಾರ ದಂದು ಬೆಳಿಗ್ಗೆ 8:30 ಗಂಟೆಯಿಂದ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಬಳಿಕ ಮಕ್ಕಳು, ಮಹಿಳೆಯರು ಹಾಗೂ ಹಿರಿಯರಿಗಾಗಿ ವಿವಿಧ ಗ್ರಾಮೀಣ ಆಟೋಟ ಸ್ಪರ್ಧೆಗಳು ಆಯೋಜಿಸಲಾಗಿದೆ. ಹಿರಿಯರಿಂದ ತುಳುನಾಡಿನ ಪರಂಪರೆಯ ಕುರಿತು ಪಾರ್ಧನ, ವಿಶೇಷ ಚೆನ್ನೆಮಣೆ ಸ್ಪರ್ಧೆ, ಆಟಿ ತಿಂಗಳ ವಿಶೇಷ ಸಾಂಪ್ರದಾಯಿಕ ತಿನಿಸುಗಳ ಸವಿಯುವಿಕೆ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ, ಕ್ರೀಡಾ ಹಾಗೂ ಗ್ರಾಮೀಣ ಸಂಪ್ರದಾಯಗಳ ಸ್ಪರ್ಧೆಗಳು ನಡೆಯಲಿದ್ದು, ಎಲ್ಲರೂ ಭಾಗವಹಿಸಲು ಸಂಘವು ಆಹ್ವಾನ ನೀಡಿದೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಬಿಲ್ಲವ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧ್ಯಕ್ಷರಾದ ಕಿರಣ್ ಕುಮಾರ್ ಮಂಜಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *