Breaking
24 Jul 2026, Fri

ಯುವವಾಹಿನಿ (ರಿ.) ಬಂಟ್ವಾಳ ಘಟಕದಿಂದ ಗುರುತತ್ವವಾಹಿನಿ 72ನೇ ಮಾಲಿಕೆ ಯಶಸ್ವಿ

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಗುರುತತ್ವವಾಹಿನಿ 72ನೇ ಮಾಲಿಕೆ ಕಾರ್ಯಕ್ರಮವು ಜುಲೈ 23ರಂದು ಸಜೀಪ ಮುನ್ನೂರಿನ ಪುರುಷೋತ್ತಮ ಪೂಜಾರಿ ಮಿತ್ತಕಟ್ಟ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು.

ಈ ಸಂದರ್ಭದಲ್ಲಿ ಜಯಶಂಕರ್ ಕಾನ್ಸಾಲೆ ಅವರು ಶ್ರೀ ನಾರಾಯಣಗುರುಗಳ ತತ್ವ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಪ್ರಥಮ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷ ಹರೀಶ್ ಅಜೆಕಲ, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಶೈಲೇಶ್ ಕುಚಿಗುಡ್ಡೆ, ನವೀನ್ ಪೂಜಾರಿ ಕಾರಾಜೆ, ಸಂಘಟನಾ ಕಾರ್ಯದರ್ಶಿ ಜಗನ್ನಾಥ್ ಕಲ್ಲಡ್ಕ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕರ್ಕೇರಾ, ಅರುಣ್ ಮಹಾಕಾಳಿಬೆಟ್ಟು, ನಾಗೇಶ್ ಪೊನ್ನೋಡಿ, ಶಿವಾನಂದ ಎಂ., ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಜಗದೀಶ್ ಕಾರಾಜೆ ಹಾಗೂ ಸದಸ್ಯರಾದ ಯಶೋಧರ್ ಕಡಂಬಲಿಕೆ, ವಿಘ್ನೇಶ್ ಬೊಳ್ಳಾಯಿ, ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ಸಾತ್ವಿಕ್ ದೇರಾಜೆ, ನಾರಾಯಣ ಪಲ್ಲಿಕಂಡ, ಅಶ್ವಿನ್ ಕಾರಾಜೆ ಮತ್ತು ವಿನಯ್ ಆಚಾರ್ಯ ಉಪಸ್ಥಿತರಿದ್ದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್ ರಾಜ್ ಪೂಂಜರಕೋಡಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವು ಭಕ್ತಿ, ಶ್ರದ್ಧೆ ಹಾಗೂ ಶ್ರೀ ನಾರಾಯಣಗುರುಗಳ ತತ್ವಪ್ರಚಾರದ ಸಂದೇಶದೊಂದಿಗೆ ಯಶಸ್ವಿಯಾಗಿ ನೆರವೇರಿತು.

Leave a Reply

Your email address will not be published. Required fields are marked *