ಬೈಂದೂರು: ಬೈಂದೂರಿನ ಹೊಸ ಬಸ್ ನಿಲ್ದಾಣದ ಜಂಕ್ಷನ್ ಬಳಿ ಲಾರಿ ಇಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತರನ್ನು ಕಳವಾಡಿ ನಿವಾಸಿ ಸುಧಾಕರ ಶೆಟ್ಟಿ (78) ಎಂದು ಗುರುತಿಸಲಾಗಿದೆ.

ಅವರು ಒತ್ತಿನೆಣೆ ಕಡೆಯಿಂದ ಬೈಂದೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


