Breaking
25 Jul 2026, Sat

ಕಾಸರಗೋಡಿನಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣ: ಆರೋಪಿ ಬಂಧನ

ಕಾಸರಗೋಡು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಚೆಂಗಳ ಸಮೀಪದ ಫೋರ್ಥ್ ಮೈಲ್ ನಿವಾಸಿ ಮೊಹಮ್ಮದ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ.

ವಿದ್ಯಾನಗರ, ಮೆಲ್ಪರಂಬ ಹಾಗೂ ಅಡೂರು ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಮಾದಕ ದ್ರವ್ಯ ಮತ್ತು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *