Breaking
25 Jul 2026, Sat

ರೌಡಿಶೀಟರ್ ವಿಘ್ನೇಶ್ ಗೂಂಡಾ ಕಾಯ್ದೆಯಡಿ ಬಂಧನ – 11 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ

ಬೆಂಗಳೂರು: ಸುಮಾರು 11 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ವಿಘ್ನೇಶ್ನನ್ನು ಕೆಂಗೇರಿ ಠಾಣೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.


ಆರೋಪಿತ ವಿಘ್ನೇಶ್ ಆರ್.ಆರ್.ನಗರ, ಚಂದ್ರಲೇಔಟ್ ಹಾಗೂ ಕೆಂಗೇರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಹಲ್ಲೆ, ದರೋಡೆ, ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಒಟ್ಟು 11 ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ನೈಋತ್ಯ ವಿಭಾಗದ ಡಿಸಿಪಿ ಅವರು ನಗರ ಪೊಲೀಸ್ ಆಯುಕ್ತರಿಗೆ ಶಿಫಾರಸು ಮಾಡಿದ್ದರು.


ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಕೆಂಗೇರಿ ಠಾಣೆ ಪೊಲೀಸರು ವಿಘ್ನೇಶ್ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಪೊಲೀಸರ ಮಾಹಿತಿ ಪ್ರಕಾರ, ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿರಂತರ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವ ರೌಡಿಶೀಟರ್ಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ.

Leave a Reply

Your email address will not be published. Required fields are marked *