Breaking
19 Sep 2026, Sat

ಮಂಗಳೂರು: ಟೋಲ್ ಪ್ಲಾಜಾ ಬಳಿ ಖಾಸಗಿ ಬಸ್ ಅಪಘಾತ – 35 ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ ಬಳಿ ಖಾಸಗಿ ಎಕ್ಸ್ಪ್ರೆಸ್ ಬಸ್ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 35 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಬಸ್, ಸೂರಲ್ಪಾಡಿ ಬಳಿ ಏಕಾಏಕಿ ಎಡಭಾಗಕ್ಕೆ ತಿರುಗಿದ ಟಿಪ್ಪರ್ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಬಲಭಾಗಕ್ಕೆ ತಿರುಗಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಬಸ್‌ನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಹಾಗೂ ಒಬ್ಬರು ಅಥವಾ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯರು ತಕ್ಷಣ ನೆರವು ನೀಡಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *