Breaking
27 Jul 2026, Mon

ವೀರಕಂಬ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಕಲ್ಲಡ್ಕ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಜಿ ವೀರಕಂಬದಲ್ಲಿ 27ನೇ ವರ್ಷದ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಮೋನಪ್ಪ ಪೂಜಾರಿ ಬಿ.ಎಂ., “ಕಾರ್ಗಿಲ್ ವಿಜಯ ದಿವಸವು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ಸಂಕೇತವಾಗಿದೆ.” ಎಂದು ಹೇಳಿದರು.

ಕಾರ್ಗಿಲ್ ವಿಜಯೋತ್ಸವದ 27ನೇ ವರ್ಷದ ಸ್ಮರಣಾರ್ಥ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನೆಡಲಾಯಿತು. ದೇಶದ ಗಡಿಯನ್ನು ಕಾಯುವ ಜವಾಬ್ದಾರಿಯ ಜೊತೆಗೆ ಪರಿಸರ ಸಂರಕ್ಷಣೆಯಲ್ಲೂ ಸೈನಿಕರು ಮಾದರಿಯಾಗಿದ್ದಾರೆ ಎಂಬ ಸಂದೇಶವನ್ನು ಈ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೋನಪ್ಪ ಪೂಜಾರಿ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿನಿ, ನಿವೃತ್ತ ಆರೋಗ್ಯ ಸುರಕ್ಷಣಾಧಿಕಾರಿ ಸುಮತಿ ಮೋನಪ್ಪ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಕ ತೌಸೀಫ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಾಭ್ಯಾಸದ ಜೊತೆಗೆ ಸ್ಕೌಟ್ಸ್-ಗೈಡ್ಸ್, ಸೇವಾದಳ, ಎನ್‌ಸಿಸಿ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಶಿಸ್ತು ಮತ್ತು ದೇಶಸೇವೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳಾದ ಶಿವಪ್ರಸಾದ್, ಬಾಲಕೃಷ್ಣ ಗೌಡ, ವೆಂಕಪ್ಪ ಗೌಡ, ಕ್ಯಾಪ್ಟನ್ ಧನಂಜಯ, ನಿವೃತ್ತ ಆರೋಗ್ಯ ಸುರಕ್ಷಣಾಧಿಕಾರಿ ಸುಮತಿ ಮೋನಪ್ಪ, ವೀರಕಂಬ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಬು ಶರ್ಮ, ವಿದ್ಯಾರ್ಥಿ ನಾಯಕ ಮಹಮ್ಮದ್ ಹಾರೂನ್ ಫರಹಾನ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮಾ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಜಯಲಕ್ಷ್ಮಿ, ಸಂಪ್ರಿಯಾ, ಪಲ್ಲವಿ ಹಾಗೂ ಸುಷ್ಮ ಕಾರ್ಯಕ್ರಮಕ್ಕೆ ಸಹಕರಿಸಿದರು.

Leave a Reply

Your email address will not be published. Required fields are marked *