Breaking
19 Sep 2026, Sat

ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಬಂಟ್ವಾಳ: ಬಿ.ಸಿ.ರೋಡ್‌ನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ಲಾವಣ್ಯ ಎಂಬವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ(ಜು. 27) ವಶಕ್ಕೆ ಪಡೆದಿದ್ದಾರೆ.

ಘಟನೆಯ ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್‌ನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ದೃಢಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *