ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು, ‘ಯುರೋಪ್’ ಹೆಸರಿನ ಶೂ ಅಂಗಡಿ ಸಂಪೂರ್ಣ ಹಾನಿಗೊಳಗಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ನಿಖರವಾದ ನಷ್ಟದ ಪ್ರಮಾಣ ಹಾಗೂ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.




