Breaking
19 Sep 2026, Sat

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರಕ್ಷಾ ರೈ ಅವರ ಚಿಕಿತ್ಸೆಗೆ ಧನ ಸಹಾಯ

ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 619ನೇ ಸೇವಾ ಯೋಜನೆ ಅಂಗವಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಕಡಬ ತಾಲೂಕಿನ ನೆಟ್ಟಣ ಬೆಂಡೆಹಿತ್ಲು ನಿವಾಸಿ ರಕ್ಷಾ ರೈ ಇವರ ವೈದ್ಯಕೀಯ ವೆಚ್ಚಕ್ಕಾಗಿ 50,000 ರೂಪಾಯಿಯ ಧನ ಸಹಾಯವನ್ನು ಜುಲೈ 27ರ ರವಿವಾರ ಬಿ.ಸಿ ರೋಡ್ ನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು. ಸೇವಾ ಕಾರ್ಯಕ್ಕೆ ಧನಸಹಾಯ ಹಾಗೂ ಸಹಕಾರ ನೀಡಿದ ಎಲ್ಲಾ ದಾನಿಗಳು, ಸೇವಾ ಬಂಧುಗಳು ಮತ್ತು ಹಿತೈಷಿಗಳಿಗೆ ಟ್ರಸ್ಟ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *