Breaking
28 Jul 2026, Tue

ಪಾಣೆಮಂಗಳೂರು: ಗಾಣಿಗರ ಸೇವಾ ಸಂಘದಿಂದ ‘ಆಟಿದ ತಮ್ಮನ’ ಕಾರ್ಯಕ್ರಮ

ಬಂಟ್ವಾಳ: ತುಳುನಾಡಿನ ಕೃಷಿಕರು ಆಟಿ ತಿಂಗಳ ಬಡತನದ ನಡುವೆಯೂ ಪ್ರಕೃತಿ ನೀಡಿದ ಕೊಡುಗೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯಕರ ಆಹಾರ ಪದ್ಧತಿಯನ್ನು ರೂಪಿಸಿಕೊಂಡಿದ್ದರು.

ತುಳುವರ ಸಾಂಪ್ರದಾಯಿಕ ಆಹಾರ ಪದ್ಧತಿ ವೈಜ್ಞಾನಿಕವಾಗಿಯೂ ಆರೋಗ್ಯಪೂರ್ಣವಾಗಿಯೂ ಇದೆ ಎಂದು ಉಪನ್ಯಾಸಕ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದ ಸುನಿಲ್ ಗಾಣಿಗ ಪಲ್ಲಮಜಲು ಅಭಿಪ್ರಾಯಪಟ್ಟರು.


ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಸುಮಂಗಲಾ ಸಭಾಂಗಣದಲ್ಲಿ ಗಾಣಿಗರ ಸೇವಾ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾದ ‘ಆಟಿದ ತಮ್ಮನ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಪದ್ಮನಾಭ ಇಡ್ಕಿದು ಮಾತನಾಡಿದರು. ಉದ್ಯಮಿಗಳಾದ ರಘು ಶನಿವಾರಸಂತೆ, ವಿಕ್ರಮ್ ಬಂಗೇರ ಸಜಿಪ, ಸತೀಶ ಕಾಡುಮಠ, ವಸಂತ ಕುಮಾರ್ ಅಣ್ಣಳಿಕೆ, ಪ್ರವೇಶ್ ಪುತ್ರೋಟಿಬೈಲು ಹಾಗೂ ಸಂಘದ ಮಾಜಿ ಉಪಾಧ್ಯಕ್ಷ ತಿಮ್ಮಪ್ಪ ಸಪಲ್ಯ ದೇವಸ್ಯ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಸ್ಯಾಕ್ಸೋಫೋನ್ ವಾದನ, ನೂತನ ವಧು-ವರರಿಗೆ ಸನ್ಮಾನ, ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಬಹುಮಾನ ವಿತರಣೆಯೂ ನಡೆಯಿತು.


ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ನರ್ಸಪ್ಪ ಅಮೀನ್, ಯುವ ವೇದಿಕೆ ಅಧ್ಯಕ್ಷ ಭುವನೇಶ್ ಮೊಗರ್ನಾಡು, ಮಹಿಳಾ ವೇದಿಕೆ ಅಧ್ಯಕ್ಷೆ ಆಶಾ ವೇದವ ಗಾಣಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಬಾಲಕೃಷ್ಣ ಸೆರ್ಕಳ ಸ್ವಾಗತಿಸಿದರು. ಕೋಶಾಧಿಕಾರಿ ವೇದವ ಗಾಣಿಗ ವಂದಿಸಿದರು. ಲಿಖಿತಾ ಶಂಭೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *