Breaking
19 Sep 2026, Sat

ಉಡುಪಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಫುಟ್ಪಾತ್‌ ಗೆ ಡಿಕ್ಕಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಫುಟ್ಪಾತ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಸೋಮವಾರ (ಜು. 27) ಸಂಜೆ ಉಡುಪಿ ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ನಡೆದಿದೆ.


ಅಪಘಾತದ ವೇಳೆ ಕಾರು ರಸ್ತೆ ಬದಿಯಲ್ಲಿದ್ದ ಸೂಚನಾ ಫಲಕಕ್ಕೂ ಡಿಕ್ಕಿ ಹೊಡೆದ ಪರಿಣಾಮ ಫಲಕ ಮುರಿದು ಬಿದ್ದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದೆ.


ಕಾರನ್ನು ಮಹಿಳೆಯೊಬ್ಬರು ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ.


ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *