Breaking
29 Jul 2026, Wed

ಗುರುವಾಯನಕೆರೆ–ವೇಣೂರು ರಸ್ತೆ ದುರಸ್ತಿ: ವೆಟ್ ಮಿಕ್ಸ್ ಹಾಕಿ ತಾತ್ಕಾಲಿಕ ಪರಿಹಾರ

ಬೆಳ್ತಂಗಡಿ: ಇತ್ತೀಚಿನ ಭಾರೀ ಮಳೆಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು.

ಸಮಸ್ಯೆಯ ಕುರಿತು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಶ್ವತ ದುರಸ್ತಿ ಕಾಮಗಾರಿಯನ್ನೂ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *