Breaking
29 Jul 2026, Wed

ಬೆಂಗಳೂರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಬೆಂಗಳೂರು: ರಸ್ತೆ ಬದಿ ಕ್ಯಾಬ್ ಗಾಗಿ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಮಮೂರ್ತಿನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಎನ್ಆರ್‌ ಐ ಲೇಔಟ್ ನಿವಾಸಿ ವಿಜಯ ರಾಘವ (42) ಎಂದು ಗುರುತಿಸಲಾಗಿದೆ.


ಪೊಲೀಸರ ಮಾಹಿತಿ ಪ್ರಕಾರ, ಭಾನುವಾರ ರಾತ್ರಿ ರಾಮಮೂರ್ತಿನಗರದ ಕಲ್ಕೆರೆ ಮಂಜುನಾಥ ನಗರದ ಮುಖ್ಯರಸ್ತೆಯಲ್ಲಿ ಮಹಿಳೆಯೊಬ್ಬರು ಕ್ಯಾಬ್ಗಾಗಿ ಕಾಯುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ವಿಜಯ ರಾಘವ, ಮಹಿಳೆಯ ಬಳಿ ನಿಂತು ಅಸಭ್ಯವಾಗಿ ಮಾತನಾಡಿದ್ದಾನೆ. ಅಲ್ಲದೆ, ಹಣದ ಆಮಿಷವೊಡ್ಡಿ ಅಸಭ್ಯ ಪ್ರಸ್ತಾಪ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.


ಘಟನೆಯಿಂದ ಆತಂಕಗೊಂಡ ಮಹಿಳೆ, ಸಂಪೂರ್ಣ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾರೆ. ಇದನ್ನು ಗಮನಿಸಿದ ಆರೋಪಿ ಬೈಕ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.


ನಂತರ ಮಹಿಳೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *