ಕಲ್ಲಡ್ಕ : ಯುವಶಕ್ತಿ ರಕ್ತನಿಧಿ ಮಂಗಳೂರು ಘಟಕ ವತಿಯಿಂದ ಸ್ನೇಹಿತರ ದಿನಾಚರಣೆ ಪ್ರಯುಕ್ತ ಆಗಸ್ಟ್ 2 ಭಾನುವಾರ ಬೃಹತ್ ರಕ್ತದಾನ ಶಿಬಿರ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿರುವುದು.

ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಓಂ ಶ್ರೀ ಸಾಯಿಗಣೇಶ ಸೇವಾ ಸಂಘ ಕಲ್ಲಡ್ಕ, ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಾಥಮಿಕ ಶಾಲೆ ಮಜಿ ವೀರಕಂಭ, ಮಾತೃಶ್ರೀ ಗೆಳೆಯರ ಬಳಗ ವೀರಕಂಭ, ಯುವಶಕ್ತಿ ಫ್ರೆಂಡ್ಸ್ ವೀರಕಂಭ, ಯುವಕೇಸರಿ ಫ್ರೆಂಡ್ಸ್ ಅರೆಬೆಟ್ಟು, ಸ್ವಸ್ತಿಕ್ ಫ್ರೆಂಡ್ಸ್ ಅಂಕದಡ್ಕ, ಕೇಸರಿ ಫ್ರೆಂಡ್ಸ್ ಕೆಲಿಂಜ, ಓಂಕಾರ ಫ್ರೆಂಡ್ಸ್ ವೀರಕಂಭ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕ , ಈ ಎಲ್ಲಾ ಸಂಘ ಸಂಸ್ಥೆಗಳು ಸಹಕಾರದೊಂದಿಗೆ ರಕ್ತದಾನ ಶಿಬಿರ ಜರಗಳಿರುವುದು.

ವ್ಯವಸ್ಥೆಯ ದೃಷ್ಟಿಯಿಂದ ರಕ್ತದಾನ ಮಾಡಲು ಬಯಸುವವರು ಸಂಘಟಕರನ್ನು, ಅಥವಾ ಸಹಕಾರ ನೀಡಿರುವ ಸಂಸ್ಥೆಯ ಪ್ರಮುಖರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿ ಕೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ.




