Breaking
19 Sep 2026, Sat

ಆಳ್ವಾಸ್ ಪ್ರಗತಿ 2026 ಉದ್ಯೋಗ ಮೇಳ: ಜು. 31ರಂದು ಬಿ.ಸಿ.ರೋಡಿನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಆಗಸ್ಟ್ 7 ಮತ್ತು 8ರಂದು ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿರುವ ಆಳ್ವಾಸ್ ಪ್ರಗತಿ 2026 ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ, ಜುಲೈ 31ರಂದು (ಶುಕ್ರವಾರ) ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ ಪ್ರಮುಖರು ಭಾಗವಹಿಸಿ ಉದ್ಯೋಗ ಮೇಳದ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ.

ಕಾರ್ಯಾಗಾರದಲ್ಲಿ ರೆಸ್ಯೂಮ್ ತಯಾರಿಸುವ ವಿಧಾನ, ಅಗತ್ಯ ದಾಖಲೆಗಳು, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ಮಾಹಿತಿ, ನೋಂದಣಿ ಪ್ರಕ್ರಿಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.

ಉದ್ಯೋಗಾಕಾಂಕ್ಷಿಗಳು ಈ ಉಚಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *