ಕಾಸರಗೋಡು: ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026ರ ಅಂಗವಾಗಿ ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ರಜತ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಸಾಹಿತಿ, ಸಂಘಟಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಶಾಂತಾ ಪುತ್ತೂರು ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026 ಪ್ರದಾನ ಮಾಡಲಾಯಿತು.

ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಮ್ಮೇಳನದ ಸರ್ವಾಧ್ಯಕ್ಷ ಡಾ. ಸಿ. ಸೋಮಶೇಖರ್, ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕರಾದ ಪತ್ರಕರ್ತ ಜಯಾನಂದ ಪೆರಾಜೆ, ಕನ್ನಡ ಭವನದ ಸಂಚಾಲಕಿ ಸಂಧ್ಯಾರಾಣಿ ಟೀಚರ್, ಜಾನಪದ ಪರಿಷತ್ತಿನ ಡಾ. ಬಾಲಾಜಿ, ವಸಂತ ಕೆರೆಮನೆ, ಡಾ. ಸುರೇಶ್ ನೆಗಳಗುಳಿ, ಕಥಾಬಿಂದುಪ್ರಕಾಶನದ ಪಿ.ವಿ. ಪ್ರದೀಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀ ವಿಶಾಲಾಕ್ಷ ಪುತ್ರಕಳ ಹಾಗೂ ಶ್ರೀಮತಿ ರೇಖಾ ಸುಧೇಶ್ ರಾವ್ ನಿರೂಪಿಸಿದರು.



