Breaking
19 Sep 2026, Sat

ಸಜೀಪಮೂಡ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ, ಪೀಠೋಪಕರಣಗಳು ಸುಟ್ಟು ಭಸ್ಮ

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ಹಲವು ವಸ್ತುಗಳು ಸುಟ್ಟು ಹಾನಿಗೊಳಗಾದ ಘಟನೆ ನಡೆದಿದೆ.


ಕೊಳಕೆ ನಿವಾಸಿ ಚಂದ್ರಹಾಸ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯುತ್ ಸಂಪರ್ಕದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಮನೆಯೊಳಗೆ ಹೊಗೆ ಆವರಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಮನೆಯೊಳಗಿನ ಪೀಠೋಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳಿಗೆ ವ್ಯಾಪಿಸಿದೆ.


ಘಟನೆಯಲ್ಲಿ ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು ಸೇರಿದಂತೆ ಹಲವು ಗೃಹೋಪಯೋಗಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಕುಟುಂಬಕ್ಕೆ ಗಣನೀಯ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ.


ಘಟನೆಯ ವೇಳೆ ಮನೆಯಲ್ಲಿದ್ದವರು ಸಮಯಪ್ರಜ್ಞೆಯಿಂದ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ತಕ್ಷಣವೇ ಬೆಂಕಿಯನ್ನು ನಿಯಂತ್ರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.


ಮಾಹಿತಿ ತಿಳಿದು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *