Breaking
30 Jul 2026, Thu

ಬೆಳ್ತಂಗಡಿ ಕ್ಷೇತ್ರದ ದೇವಾಲಯಗಳ ಅಭಿವೃದ್ಧಿಗೆ ₹3 ಕೋಟಿ ಅನುದಾನ ಕೋರಿ ಡಿಸಿಎಂ ಪರಮೇಶ್ವರ್‌ಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಒಟ್ಟು ₹3 ಕೋಟಿ ಅನುದಾನ ಮಂಜೂರು ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಜುಲೈ 30ರಂದು ರಾಜ್ಯ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮನವಿಯಲ್ಲಿ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಅಭಿವೃದ್ಧಿಗೆ ₹1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ಅಭಿವೃದ್ಧಿಗೆ ₹50 ಲಕ್ಷ ಹಾಗೂ ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಅಭಿವೃದ್ಧಿಗೆ ₹50 ಲಕ್ಷ ಅನುದಾನ ನೀಡುವಂತೆ ಕೋರಲಾಗಿದೆ.

ಈ ಮೂಲಕ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕ ಹರೀಶ್ ಪೂಂಜ ಮನವಿಯಲ್ಲಿ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *