Breaking
30 Jul 2026, Thu

ಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಕಿರುಕುಳ ಆರೋಪ: ಹೆಡ್ ಕಾನ್‌ಸ್ಟೇಬಲ್‌ಗೆ ಸಾರ್ವಜನಿಕರಿಂದ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ನಗರದ ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂಜಯನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಹಲ್ಲೆಯಿಂದ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜುಲೈ 28ರಂದು ಗಂಗಮ್ಮನಗುಡಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಬಿಎಂಟಿಸಿ ಬಸ್ಗೆ ಹತ್ತಿದ್ದ ಮಂಜುನಾಥ್ ಬಸ್ನಲ್ಲಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮಹಿಳೆ ತಕ್ಷಣವೇ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.


ಬಸ್ ಗಂಗಮ್ಮನಗುಡಿ ಸರ್ಕಲ್ಗೆ ತಲುಪುತ್ತಿದ್ದಂತೆ ಮಹಿಳೆಯ ಸಂಬಂಧಿಕರು ಹಾಗೂ ಸ್ಥಳೀಯರು ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎರಡೂ ಕಡೆಯಿಂದ ದೂರು ಮತ್ತು ಪ್ರತಿದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *