Breaking
31 Jul 2026, Fri

ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ : ಪ್ರಭಾಕರ ಪ್ರಭು

ಬಂಟ್ವಾಳ: ರಾಜ್ಯದೆಲ್ಲೆಡೇ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿನ ಕೆಲವೊಂದು ಪ್ರದೇಶಗಳಲ್ಲಿ ಯುವಜನರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಡ್ರಗ್, ಗಾಂಜಾ ಸಹಿತ ಮಾದಕ ಸೇವನೆಯು ಅತಿಯಾಗುತ್ತಿದ್ದು ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಬೇಕಾಗಿದೆ.

ಆಂಬುಲೆನ್ಸ್ ವಾಹನದಲ್ಲಿಯೂ ಸಹ ಮಾದಕ ಸೇವನೆಯ ಐಟಂ ಗಳು ಸಾಗಾಟವಾಗುತ್ತಿದೆ ಎಂದಾದರೆ ತಡೆಕಟ್ಟುವಿಕೆ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಈ ಸವಾಲಿನ ಸಮಯದಲ್ಲಿ ವಿದ್ಯಾರ್ಥಿಗಳನ್ನು ಡ್ರಗ್ ಟೆಸ್ಟ್ ಗೆ ಒಳಪಡಿಸುವ ಪೊಲೀಸರ ಕಾರ್ಯಶೈಲಿ ಶ್ಲಾಘನೀಯವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಪತ್ರಿಕಾ ಹೇಳಿಕೆಯ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಂಗಳೂರು ನಗರಗಳಲ್ಲಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಸಹ ಡ್ರಗ್, ಗಾಂಜಾ ವಾಸನೆ ಹೆಚ್ಚಾಗುತ್ತಿದ್ದು,ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಅಧಿಕಾರಿಗಳನ್ನು ಶ್ಲಾಘಿಸಿದ ಅವರು ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿನ ಪ್ರತಿಯೊಂದು ಪೊಲೀಸ್ ಠಾಣಾ ವ್ಯಾಪ್ತಿಯ ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು ಸಹಿತ ಎಲ್ಲಾ ಖಾಸಗಿ ಮತ್ತು ಸರಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕಾಲೇಜು ಬಿಡುವ ಸಮಯದಲ್ಲಿ ಕಡ್ಡಾಯವಾಗಿ ಪ್ರತಿ ತಿಂಗಳಿಗೆ ಒಮ್ಮೆ ಡ್ರಗ್ ಪರೀಕ್ಷೆಗೆ ಒಳಪಡಿಸಬೇಕು ಎಂದೂ ಈ ಮೂಲಕ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *