Breaking
19 Sep 2026, Sat

ಹಣದ ಬೇಡಿಕೆ ಆರೋಪಕ್ಕೆ ತಕ್ಷಣದ ಕ್ರಮ; ಕಾರ್ಕಳ ಡಿವೈಎಸ್‌ಪಿ ಸೇರಿ ಮೂವರು ಅಮಾನತು

ಉಡುಪಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಕಾರ್ಕಳ ಡಿವೈಎಸ್‌ಪಿ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನೀಡಿದ ಮಾಹಿತಿಯಂತೆ, ವೈರಲ್ ವಿಡಿಯೋ ಹಾಗೂ ಸಾರ್ವಜನಿಕವಾಗಿ ಕೇಳಿಬಂದ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಿಂದ ಪ್ರಾಥಮಿಕ ತನಿಖೆ ನಡೆಸಲಾಗಿತ್ತು.


ಪ್ರಾಥಮಿಕ ತನಿಖಾ ವರದಿಯಲ್ಲಿ ಕಂಡುಬಂದ ಅಂಶಗಳ ಆಧಾರದ ಮೇಲೆ ಕಾರ್ಕಳ ಉಪವಿಭಾಗದ ಡಿವೈಎಸ್‌ಪಿ ವಿಜಯ ಪ್ರಸಾದ್, ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ.


ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದ್ದು, ಅಂತಿಮ ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *