Breaking
1 Aug 2026, Sat

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಯಶಪಾಲ್ ಸುವರ್ಣ ವಿರುದ್ಧ ಬಂಟ್ವಾಳದಲ್ಲಿ ದೂರು

ಬಂಟ್ವಾಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಅವರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಶುಕ್ರವಾರ ಬಿ.ಸಿ.ರೋಡು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.


ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ನೇತೃತ್ವದ ನಿಯೋಗವು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಅವರಿಗೆ ಮನವಿ ಸಲ್ಲಿಸಿತು.


ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಬೋಳಂತೂರು, ಶಾಂತಿಯುತವಾಗಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪ್ರಚೋದಿಸಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಗಲಭೆಯ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಹಾಗೂ ಬಿಜೆಪಿಯಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಶಾಸಕ ಯಶಪಾಲ್ ಸುವರ್ಣ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.


ನಿಯೋಗದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಲಾದ್ರು ಮಿನೇಜಸ್, ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಬಿ. ಅಬ್ದುಲ್ಲ, ಗಣೇಶ್ ಶೆಟ್ಟಿ ಗೋಳ್ತಮಜಲು, ಮಹಮ್ಮದ್ ನಂದಾವರ, ಸಿದ್ದಿಕ್ ಸೆರಾವು, ಸಿರಾಜ್ ಮದಕ್, ಮಹಮ್ಮದ್ ಮಂಚಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *