ಬಂಟ್ವಾಳ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2026-27ನೇ ಸಾಲಿನ ವಿವಿಧ ಗೆಜೆಟೆಡ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 319 ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸಹಾಯಕ ಆಯುಕ್ತರು (ಕಂದಾಯ ಇಲಾಖೆ), ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳು ಇದರಲ್ಲಿ ಸೇರಿವೆ.

ಅಭ್ಯರ್ಥಿಗಳು ಆಗಸ್ಟ್ 31, 2026 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪೂರ್ವಭಾವಿ ಪರೀಕ್ಷೆಯು ನವೆಂಬರ್ 15, 2026 ರಂದು ನಡೆಯಲಿದೆ.

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕರಾವಳಿ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಜಿ ಸಲ್ಲಿಸಿ, ಪರೀಕ್ಷೆಗೆ ಸಮರ್ಪಕವಾಗಿ ಸಿದ್ಧತೆ ನಡೆಸಿ ಯಶಸ್ಸು ಸಾಧಿಸಬೇಕು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.


