ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1ರಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯ ಮುಳಿಯ ಜುವೆಲ್ಲರ್ಸ್ ಸಂಸ್ಥೆಯ ವತಿಯಿಂದ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.




