Breaking
3 Aug 2026, Mon

ನಾಪತ್ತೆಯಾಗಿದ್ದ ರಾಯಿ ಗ್ರಾಮದ ಜೀವನ್ ಪಿಂಟೋ ಮೃತದೇಹ ಪತ್ತೆ

ಬಂಟ್ವಾಳ: ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೋ (48) ಅವರು ನಾಪತ್ತೆಯಾಗಿದ್ದ ಪ್ರಕರಣ ದುಃಖಾಂತ್ಯ ಕಂಡಿದ್ದು, ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗದ್ದೆ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.


ಶನಿವಾರ ರಾತ್ರಿ ಮನೆ ಸಮೀಪದ ತುಂಬಿ ಹರಿಯುತ್ತಿದ್ದ ತೋಡಿನ ಬಳಿ ಜೀವನ್ ಅವರ ಚಪ್ಪಲಿ ಮತ್ತು ಟಾರ್ಚ್ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಅವರು ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿತ್ತು. ತಕ್ಷಣವೇ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ (NDRF) ತಂಡಗಳು ರಾತ್ರಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದವು.


ನಿರಂತರ ಮಳೆ ಹಾಗೂ ತೀವ್ರ ನೀರಿನ ಹರಿವಿನಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾದರೂ, ರಕ್ಷಣಾ ಸಿಬ್ಬಂದಿ ಶೋಧವನ್ನು ಮುಂದುವರಿಸಿದ್ದರು. ಅಂತಿಮವಾಗಿ ಸೋಮವಾರ ಬೆಳಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.


ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ಸೇರಿದಂತೆ ಮುಂದಿನ ಕಾನೂನು ಕ್ರಮಗಳಿಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಈ ದುರ್ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *