ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಹಾಗೂ ನವೀಕೃತ ಸುಮಂಗಲಾ ಕಲ್ಯಾಣ ಮಂಟಪ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ರಾಜಶೇಖರ್ ಗಾಣಿಗ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್ ಮೈಸೂರು, ಮುಂಬೈ ಗಾಣಿಗರ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.





