ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರಿನ ಗಾಣಿಗ ಸೌಧಕ್ಕೆ ಭಾನುವಾರ ಭೇಟಿ ನೀಡಿದ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್ ಮೈಸೂರು ಅವರು ಮಾಜಿ ಸಚಿವ ಬಿ. ರಮಾನಾಥ ರೈ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ರಾಮಣ್ಣ ಪೂಜಾರಿ, ಹರೀಶ ಗಾಣಿಗ ಮೈಸೂರು, ಗಣೇಶ್ ಪೂಜಾರಿ ಪೆರಾರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.






