ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಅತ್ಯಂತ ರಮಣೀಯ ಹಾಗೂ ವಿಶಾಲವಾದ ಗುರುವಾಯನಕೆರೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.





