ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ತಿಂಗಳ ಸಂಘಟನಾ ಸಭೆಯು ಪಿನಾಕಿ ಸಭಾ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಕಾರ್ಯ ಚಟುವಟಿಕೆಗಳು ಹಾಗೂ ಎಸ್‌ಐಆರ್ (SIR) ಕುರಿತಂತೆ ವಿಸ್ತೃತ ಚರ್ಚೆ ನಡೆಯಿತು.

ಶಾಸಕ ಹರೀಶ್ ಪೂಂಜ ಅವರು ಮಾತನಾಡಿ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿ, ಮುಂದಿನ ಕಾರ್ಯಯೋಜನೆಗಳ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್ ಅವರು ಸಂಘಟನಾತ್ಮಕ ವಿಷಯಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಗಳೂರು ವಿಭಾಗದ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ‘ಮನ್ ಕಿ ಬಾತ್’ ಪ್ರಮುಖ್ ಸೀತಾರಾಮ್ ಬಿ.ಎಸ್., ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ ಸೇರಿದಂತೆ ಮಂಡಲ ಪದಾಧಿಕಾರಿಗಳು, ಜಿಲ್ಲಾ ವಿವಿಧ ಪದಾಧಿಕಾರಿಗಳು, ಮಹಾಶಕ್ತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಧನ್ಯವಾದ ಸಲ್ಲಿಸಿದ್ದು, ಅರವಿಂದ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.


