ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿ ವತಿಯಿಂದ ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ವಿಭಾಗದ ‘ಬೆಸ್ಟ್ ಎಂಎಲ್ಎ’ ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರತ್ನಾಕರ್ ಬುಣ್ಣನ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸೆಬಾಸ್ಟಿಯನ್ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





