ಮಂಗಳೂರು: ನಗರದ ಸಮೀಪದ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ನಡೆಸಿದ ದಿಢೀರ್ ತಪಾಸಣೆ ವೇಳೆ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಆ. 4ರ ಮಂಗಳವಾರ ನಡೆದಿದೆ.

ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು, ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮೂವರೂ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.

ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಗಾಂಜಾ ತಂದಿದ್ದ ಪ್ರಮುಖ ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿದ್ಯಾರ್ಥಿಯ ಶೈಕ್ಷಣಿಕ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ಪೆಡ್ಲರ್‌ಗಾಗಿ ಪೊಲೀಸರು ತೀವ್ರ ಶೋಧ ಮುಂದುವರಿಸಿದ್ದಾರೆ.


