ಕಾಪು: ಉದ್ಯಾವರದ ಪಿತ್ರೋಡಿ ತಾಂಡೆಲ್ ಗೆಸ್ಟ್ ಹೌಸ್ ಸಮೀಪದ ಪಾಪನಾಶಿನಿ ಹೊಳೆಯಲ್ಲಿ ಸುಮಾರು 30ರಿಂದ 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಹೊಳೆಯಿಂದ ಮೇಲಕ್ಕೆತ್ತಿ ಶವಾಗಾರಕ್ಕೆ ರವಾನಿಸಿದರು. ಈ ವೇಳೆ ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯದಲ್ಲಿ ಸಹಕರಿಸಿದರು.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಹೊಂದಿರುವವರು ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.





