ಕಲ್ಲಡ್ಕ: ಬಿಲ್ಲವ ಸಂಘ (ರಿ) ಕಲ್ಲಡ್ಕ ವಲಯ ಹಾಗೂ ಬಿಲ್ಲವ ಮಹಿಳಾ ಘಟಕ ಕಲ್ಲಡ್ಕ ವಲಯದ ಆಶ್ರಯದಲ್ಲಿ ‘ಬಿಲ್ಲವ ಕುಟುಂಬ ಮಿಲನ–2026’ ಕಾರ್ಯಕ್ರಮವು ಆಗಸ್ಟ್ 9ರಂದು (ಭಾನುವಾರ) ಬೆಳಿಗ್ಗೆ 9 ಗಂಟೆಯಿಂದ ವೀರಕಂಭ ಗ್ರಾಮ ಸಮಿತಿಯ ಅಧ್ಯಕ್ಷ ಪ್ರಶಾಂತ್ ಪೂಜಾರಿ ತೆಕ್ಕಿಪಾಪು ಅವರ ನಿವಾಸದ ವಠಾರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮವು ಗೋಳ್ತಮಜಲ್, ವೀರಕಂಭ, ಬಾಳ್ತಿಲ, ಅಮ್ಟೂರು, ಬೋಳಂತೂರು, ಬೊಂಡಲ ಹಾಗೂ ಬಿಲ್ಲವ ಗ್ರಾಮ ಸಮಿತಿಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಬಂಧು-ಬಳಗಕ್ಕಾಗಿ ವಿವಿಧ ಮನರಂಜನಾ ಸ್ಪರ್ಧೆಗಳು, ಜಾನಪದ ನೃತ್ಯ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬಿಲ್ಲವ ಸಮಾಜದ ಎಲ್ಲಾ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.



