ತೀರ್ಥಹಳ್ಳಿ: ತಾಲೂಕಿನ ಬಾಳಗಾರು ಸಮೀಪ ಭಾರಿ ಮಳೆಯ ನಡುವೆ ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಬಿದ್ದ ಘಟನೆ ಗುರುವಾರ(ಆ. 6) ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಮೆರೆದು ಈಜಿಕೊಂಡು ದಡ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.






