Breaking
21 Sep 2026, Mon

ಉಡುಪಿ: ಕಲ್ಮಾಡಿಯ 27 ವರ್ಷದ ಮಾಡೆಲ್ ಕೃತಿ ಬಂಗೇರ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ 27 ವರ್ಷದ ಮಾಡೆಲ್ ಕೃತಿ ಬಂಗೇರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಕೃತಿ ಬಂಗೇರ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು, ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ. ಕಲ್ಮಾಡಿಯಲ್ಲಿ ತಾಯಿ ಹಾಗೂ ಸಹೋದರಿಯೊಂದಿಗೆ ವಾಸವಾಗಿದ್ದ ಕೃತಿ, ಮನೆಯ ಕೋಣೆಯಲ್ಲೇ ವೇಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಗಸ್ಟ್ 6ರಂದು ತಾಯಿ ರತ್ನಾ ಅವರು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದು, ಸಹೋದರಿಯೂ ಉದ್ಯೋಗದ ಕಾರಣ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗಿದಾಗ, ಕೃತಿ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಎಷ್ಟೇ ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ತಾಯಿ ತಮ್ಮ ಸಹೋದರ ಚಂದ್ರ ಅವರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಬೆಡ್‌ರೂಮ್‌ನ ಫ್ಯಾನಿಗೆ ವೇಲ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಮೃತರಾಗಿರುವುದು ಕಂಡುಬಂದಿದೆ.

ಕುಟುಂಬದವರ ಮಾಹಿತಿ ಪ್ರಕಾರ, ಕಳೆದ ಕೆಲವು ದಿನಗಳಿಂದ ಕೃತಿ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದೆ. ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *