ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಆಗಸ್ಟ್ 5, 2026ರಂದು “ಕ್ರಿಪ್ಟೋ ಕರೆನ್ಸಿ ಮತ್ತು ಭಾರತೀಯ ಷೇರು ಮಾರುಕಟ್ಟೆ” ವಿಷಯದ ಕುರಿತು ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಯಿತು.

ಕಾರ್ಯಗಾರಕ್ಕೆ ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಗಾರದಲ್ಲಿ ಭಾರತೀಯ ಷೇರು ಮಾರುಕಟ್ಟೆಯ ಮೂಲಭೂತ ಪರಿಚಯ, ಉಳಿತಾಯವನ್ನು ಹೂಡಿಕೆಯಾಗಿಸುವ ಮಹತ್ವ, ವಿವಿಧ ಷೇರುಗಳ ಖರೀದಿ-ಮಾರಾಟದ ಪ್ರಾಯೋಗಿಕ ವಿಧಾನಗಳು, ಕ್ರಿಪ್ಟೋ ಕರೆನ್ಸಿಯ ಪರಿಚಯ ಹಾಗೂ ಭಾರತೀಯ ಷೇರು ಮಾರುಕಟ್ಟೆ ಮತ್ತು ಕ್ರಿಪ್ಟೋ ಕರೆನ್ಸಿಯ ನಡುವಿನ ಪ್ರಮುಖ ವ್ಯತ್ಯಾಸಗಳನ್ನು ವಿವರವಾಗಿ ತಿಳಿಸಲಾಯಿತು.

ಇದಲ್ಲದೆ Bitcoin, XRP, Ethereum ಹಾಗೂ Binance Coin ಸೇರಿದಂತೆ ವಿವಿಧ ಕ್ರಿಪ್ಟೋ ಕರೆನ್ಸಿಗಳ ವಹಿವಾಟಿನ ಕುರಿತು ಪ್ರಾಯೋಗಿಕ ಅಧಿವೇಶನವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಗಾರದಲ್ಲಿ ಭಾಗವಹಿಸಿ ಹೂಡಿಕೆ, ಡಿಜಿಟಲ್ ಆರ್ಥಿಕತೆ ಹಾಗೂ ಹಣಕಾಸು ಜಾಗೃತಿಗೆ ಸಂಬಂಧಿಸಿದ ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು.

ಡಿಜಿಟಲ್ ಲ್ಯಾಬ್ ಚಟುವಟಿಕೆಗಳೊಂದಿಗೆ ನಡೆದ ಈ ಕಾರ್ಯಗಾರವು ಯಶಸ್ವಿಯಾಗಿ ನೆರವೇರಿತು.







