Breaking
21 Sep 2026, Mon

ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಕಕ್ಯಪದವು: ಬಂಟ್ವಾಳ ತಾಲೂಕು ಮಟ್ಟದ 17 ವರ್ಷದೊಳಗಿನ ಪ್ರೌಢಶಾಲಾ ಹಾಗೂ 14 ವರ್ಷದೊಳಗಿನ ಪ್ರಾಥಮಿಕ ವಿಭಾಗದ ಬಾಲಕ-ಬಾಲಕಿಯರ ಚೆಸ್ ಪಂದ್ಯಾಟವು ಆಗಸ್ಟ್ 6ರಂದು ಸಿದ್ಧಕಟ್ಟೆಯ ಗುಣಶ್ರೀ ವಿದ್ಯಾಲಯದಲ್ಲಿ ನಡೆಯಿತು.‌

ಈ ಸ್ಪರ್ಧೆಯಲ್ಲಿ ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿ ವಂಶಿತ್ ಹಾಗೂ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿಗಳಾದ ಅಭಿನವ್ ಪ್ರಭು ಮತ್ತು ನಮನ್ ಸಿ. ಶೆಟ್ಟಿ ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 7ನೇ ತರಗತಿಯ ವಿದ್ಯಾರ್ಥಿ ನಮನ್ ಸಿ. ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕೆ. ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಇದೇ ರೀತಿಯ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *