ಬಂದಾರು: ಶಿವ ಗೆಳೆಯರ ಬಳಗ (ರಿ.), ಮೈರೋಳ್ತಡ್ಕ, ಬಂದಾರು ಇದರ 2026ರಿಂದ 2029ರವರೆಗಿನ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಜಗದೀಶ್ ಗೌಡ ಕೊಂಬೇಡಿ, ಉಪಾಧ್ಯಕ್ಷರಾಗಿ ದಾಮೋದರ ಗೌಡ ಚಾಕೋಟೆದಡಿ, ಕಾರ್ಯದರ್ಶಿಯಾಗಿ ಚೇತನ್ ಗೌಡ ಕುರಿಯಾಳ, ಜೊತೆ ಕಾರ್ಯದರ್ಶಿಯಾಗಿ ಚಿದಾನಂದ ಗೌಡ ಪಾಂಜಾಳ ಹಾಗೂ ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಕೊಳ್ಳಕೋಡಿ ಆಯ್ಕೆಯಾದರು.

ಆಯ್ಕೆ ಪ್ರಕ್ರಿಯೆಯಲ್ಲಿ ಸಂಘದ ಗೌರವ ಸಲಹೆಗಾರರು, ಹಿರಿಯರು, ಪ್ರಮುಖರು ಹಾಗೂ ಸದಸ್ಯರು ಉಪಸ್ಥಿತರಿದ್ದರು.



