Breaking
8 Aug 2026, Sat

ಬಂಟ್ವಾಳ: ಬಿ.ಸಿ.ರೋಡ್ ಟಿಪ್ಪರ್–ಸ್ಕೂಟರ್ ಅಪಘಾತ; ಗಾಯಗೊಂಡ ಸವಾರ ಸಾವು

ಬಂಟ್ವಾಳ: ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ದಯಾನಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆ.6ರಂದು ಸಂಜೆ ಸುಮಾರು 6.30ರ ವೇಳೆಗೆ ಅಪಘಾತ ಸಂಭವಿಸಿದ್ದು, ದಯಾನಂದ ಕುಲಾಲ್ ಹಾಗೂ ಹಿಂಬದಿ ಸವಾರ ಯಶ್ವಂತ್ ಕುಲಾಲ್ ಸ್ಕೂಟರ್‌ನಲ್ಲಿ ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಕಲ್ಲಡ್ಕದಿಂದ ಲೊರೆಟ್ಟೊ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಶ್ವಂತ್ ಕುಲಾಲ್ ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಯಾನಂದ ಅವರು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಟಿಪ್ಪರ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 281, 125(ಎ) ಹಾಗೂ 106(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *