ಬಂಟ್ವಾಳ: ರಾಜ್ಯದ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಕೇಂದ್ರ ಕೃಷಿ ಮತ್ತು ಕಲ್ಯಾಣ ಇಲಾಖೆಯ 2026–27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಅವಧಿಯನ್ನು ಆ.14ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಆದೇಶದಂತೆ ತೋಟಗಾರಿಕೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ಈ ಹಿಂದೆ ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಸಾಧ್ಯವಾಗದ ರೈತರಿಗೆ ಇದೀಗ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೀಮಿಯಂ ಪಾವತಿಸಲು ಬಾಕಿ ಇರುವ ರೈತರು ಆ.14ರೊಳಗೆ ತಮ್ಮ ಕಾರ್ಯವ್ಯಾಪ್ತಿಯ ಸಂಬಂಧಪಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವಿಮೆ ಪ್ರೀಮಿಯಂ ಪಾವತಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.




